ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆತರೆ ಸದೃಡ ಸಮಾಜ ನಿರ್ಮಾಣ ಸಾಧ್ಯವಿದೆ. ಹೆಣ್ಣು ಮಕ್ಕಳಿಗೂ ಉತ್ತಮ ಶಿಕ್ಷಣ ದೊರಕಬೇಕು. ಅದಕ್ಕೆ ಪೂರಕವಾದ ವ್ಯವಸ್ಥೆಗಳು ಸಮಾಜದ ಮೂಲಕ ಆಗಬೇಕು ಎಂದು ಕಿನ್ನಿಗೋಳಿ ಚರ್ಚ್ ನ ಧರ್ಮಗುರು ಫಾ| ಫಾವೊಸ್ತಿನ್ ಲೋಬೋ ಹೇಳಿದರು.
ಅವರು ಆ. 23 ರಂದು ಕಿನ್ನಿಗೋಳಿ ಚರ್ಚ್ ಸಭಾಭವನದಲ್ಲಿ ಕಿನ್ನಿಗೋಳಿ ಕಥೊಲಿಕ್ ಸಭಾ ಘಟಕ ಇದರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಹಾಯಕ ಧರ್ಮಗುರು ಫಾ| ವಿವೇಕ್ ಪಿಂಟೋ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಸಿಕ್ವೇರಾ, ಕಾರ್ಯದರ್ಶಿ ವಿನ್ಸಂಟ್ ಮಥಾಯಸ್, ಕಥೊಲಿಕ್ ಸಭಾದ ಅಧ್ಯಕ್ಷ ಪ್ರಕಾಶ್ ಡಿಸೋಜ, ಕಾರ್ಯದರ್ಶಿ ಗ್ರೆಟ್ಟಾ ಫೆರ್ನಾಂಡಿಸ್, ಕೋಶಾಧಿಕಾರಿ ನವೀನ್ ಡಿಸೋಜ, ನಿಕಟ ಪೂರ್ವ ಅಧ್ಯಕ್ಷೆ ಮೆಲಿಟಾ ಡಿಸೋಜ, ವಲಯದ ಅಧ್ಯಕ್ಷ ಫ್ರಾನ್ಸಿಸ್ ಸೆರಾವೊ ಹಾಗೂ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.